Spread the love

ಲಬುರ್ಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ,ಕುಮಾರಸ್ವಾಮಿ, ಕೋಲಾರ ಕ್ಷೇತ್ರ ಸಿದ್ದರಾಮಯ್ಯನವರಿಗೆ ಸೇಫ್ ಅಲ್ಲ ಎಂದು ಹೇಳಿದ್ದಾರೆ.

ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯನವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ.

ಕೋಲಾರದಲ್ಲಿ ಸಿದ್ದರಾಮಯ್ಯನವರನ್ನು ದೇವರೇ ಕಾಪಾಡಬೇಕು ಎಂದು ಹೇಳಿದರು.

ನಾನು ಕೋಲಾರದಲ್ಲಿ ಸುತ್ತಾಡಿ ಜನರ ಭಾವನೆಗಳನ್ನು ತಿಳಿದುಕೊಂಡಿದ್ದೇನೆ. ಕೋಲಾರ ಜಿಲ್ಲಾ ಕಾಂಗ್ರೆಸ್ ನವರಿಗೆ ಮತಗಳನ್ನು ಪಡೆಯುವ ಶಕ್ತಿ ಇಲ್ಲ. ಹಾಗಾಗಿ ಬಲವಂತದಿಂದ ಸಿದ್ದರಾಮಯ್ಯ ಅವರನ್ನು ನಿಲ್ಲಿಸಲು ಹೊರಟಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡಿದ್ರೆ ಹರಕೆಯ ಕುರಿ ಆಗ್ತಾರೆ. ಇದರಲ್ಲಿ ಅನುಮಾನ ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

By admin