Spread the love

ನ್ನು ಎರಡ್ಮೂರು ತಿಂಗಳಿನಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಈಗಿನಿಂದಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಾವು ಕಾಂಗ್ರೆಸ್ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದರ ಮಧ್ಯೆ ಇಂದು ಪಕ್ಷೇತರ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

ಇದರ ಮಧ್ಯೆ ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಸಂಕ್ರಾಂತಿ ಬಳಿಕ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಯೋಗೇಶ್ವರ್ ಈ ಕುರಿತು ಮಾಹಿತಿ ನೀಡಿದ್ದು, ಹೀಗಾಗಿ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಜೆಡಿಎಸ್ ತನ್ನ ಪ್ರಭಾವವನ್ನು ಹೊಂದಿರುವ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಕಾಲೂರಲು ತಯಾರಿ ನಡೆಸಿದ್ದು, ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಜಿಲ್ಲೆಗೆ ಒಮ್ಮೆ ಭೇಟಿ ನೀಡಿ ಚುನಾವಣೆ ರಣಕಹಳೆ ಮೊಳಗಿಸಿದ್ದಾರೆ. ಇದರ ಜೊತೆಗೆ ಇತರ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆದಿದ್ದು, ಪಕ್ಷೇತರವಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಕರೆತಂದರೆ ಮತ್ತಷ್ಟು ಬಲ ಬರುತ್ತದೆ ಎಂಬ ಲೆಕ್ಕಾಚಾರ ನಾಯಕರದ್ದಾಗಿದೆ.


Spread the love

By admin