Spread the love

ಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಅಣ್ಣಾಮಲೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರಾದರೂ ಪರಾಭವಗೊಂಡಿದ್ದರು.

ತಮಿಳುನಾಡಿನಲ್ಲಿ ಬಿಜೆಪಿ ನೆಲೆಯೂರುವಂತೆ ಮಾಡಲು ಅಣ್ಣಾಮಲೈ ನಿರಂತರ ಪ್ರಯತ್ನ ನಡೆಸಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆಯಲ್ಲಿ ಅಣ್ಣಾಮಲೈ ಅವರಿಗೆ ಕೇಂದ್ರ ಸರ್ಕಾರ ಬಿಗಿ ಭದ್ರತೆ ನೀಡಿದ್ದು, ಇದರ ಮಧ್ಯೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಕುರಿತಂತೆ ಅಣ್ಣಾಮಲೈ ಮಹತ್ವದ ಹೇಳಿಕೆ ನೀಡಿದ್ದಾರೆ.

ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಾವು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವುದೇ ನನ್ನ ಗುರಿ ಎಂದಿದ್ದಾರೆ.


Spread the love

By admin