ಬೆಂಗಳೂರು: ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್. ನಾಗೇಶ್, ಕಡೂರು ಕ್ಷೇತ್ರದ ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿ.ಎಲ್.ಪಿ. ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಬೆಂಬಲಿಗರ ಜೊತೆಗೆ ಹೆಚ್. ನಾಗೇಶ್ ಮತ್ತು ವೈ.ಎಸ್.ವಿ. ದತ್ತ, ಮುಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕಾಂಗ್ರೆಸ್ ಧ್ವಜ ನೀಡುವ ಮೂಲಕ ಡಿ.ಕೆ. ಶಿವಕುಮಾರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.