Spread the love

ತ್ತೀಚೆಗಷ್ಟೇ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನ ಕೆ.ಎನ್. ರಾಜಣ್ಣ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಕೊಡುವಂತೆ ಹೇಳಿದ್ದ ತುಮಕೂರು ಕ್ಷೇತ್ರದ ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಈಗ ಮತ್ತೊಂದು ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ.

 

ಶನಿವಾರದಂದು ತುಮಕೂರು ಜಿಲ್ಲೆ, ತಿಪಟೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರು ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿಯೇ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಇನ್ನು ಮುಂದೆ ಯಾವುದೇ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಜಿ.ಎಸ್. ಬಸವರಾಜು ಹೇಳಿದ್ದು, ಹೀಗಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.


Spread the love

By admin