Spread the love

ರಾಯಚೂರು: ಮುದಗಲ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಳಿ ಘಟನೆ ನಡೆದಿದೆ.

ತಾಯಿ ಭಾರತಿ(29) ಮತ್ತು ಮಗ ಉದಯ ಸಿಂಗ್(11) ಮೃತಪಟ್ಟವರು ಎಂದು ಹೇಳಲಾಗಿದೆ.

ಇವರು ಲಿಂಗಸುಗೂರು ತಾಲೂಕಿನ ಯರದೊಡ್ಡಿ ತಾಂಡಾ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

By admin