Spread the love

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ 20 ವರ್ಷದ ವಿದ್ಯಾರ್ಥಿನಿಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ಯುವತಿಯ ಸಹಪಾಠಿ ಮತ್ತು ಬಾಯ್ ಫ್ರೆಂಡ್ ಎದುರಲ್ಲಿ ನಿರ್ಜನ ಪ್ರದೇಶದಲ್ಲಿ ದುಷ್ಕರ್ಮಿಗಳು ಕೃತ್ಯವಸಗಿದ್ದಾರೆ.

ಮದ್ಯ ಸೇವನೆ ಮಾಡಿದ್ದ ದುಷ್ಕರ್ಮಿಗಳು ವಿದ್ಯಾರ್ಥಿಯನಿಯ ಬಾಯ್ ಫ್ರೆಂಡ್ ಗೆ ತೀವ್ರವಾಗಿ ಥಳಿಸಿದ್ದಾರೆ. ನಂತರ ಯುವತಿಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳಲ್ಲಿ ಐವರನ್ನು ಬಂಧಿಸಲಾಗಿದ್ದು, ಮತ್ತೊಬ್ಬನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

By admin