Spread the love

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಹೋರಿ ತಿವಿದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಇಬ್ಬರೂ ಹೋರಿ ತಿವಿದು ಮೃತಪಟ್ಟಿದ್ದಾರೆ.

 

24 ವರ್ಷದ ರಂಗನಾಥ್ ಹಾಗೂ 32 ವರ್ಷದ ಲೋಕೇಶ್ ಮೃತರು. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ರಂಗನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಇನ್ನು ಶಿವಮೊಗ್ಗ ತಾಲೂಕಿನ ಕೊನಗನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಲೋಕೇಶ್ ಎಂಬುವವರಿಗೆ ಎದೆಗೆ ಹೋರಿ ತಿವಿದಿದೆ. ಹೋರಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೋಕೇಶ್ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಂಸಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆಗಳು ನಡೆದಿವೆ.


Spread the love