Spread the love

ಶಿವಮೊಗ್ಗ: ಮೊರಾರ್ಜಿ ವಸತಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಊಟದ ನಂತರ ವಿದ್ಯಾರ್ಥಿಗಳಲ್ಲಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin