Spread the love

ಚಿಕ್ಕಮಗಳೂರು: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆಯನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿತೀಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ.

ಮತ್ತೊಬ್ಬ ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ ನಿತೇಶ್ ವಂಚಿಸಿದ ಆರೋಪ ಕೇಳಿಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈಗಾಗಲೇ 17 ವರ್ಷದ ಬಾಲಕಿ ಆರೋಪಿ ನಿತೇಶ್ ನಿಂದ ಮೋಸ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕಿ ಆತ್ಮಹತ್ಯೆಯ ನಂತರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬಾಲಕಿ ಸಾವಿನ ನಂತರ ಮತ್ತೊಬ್ಬ ಸಂತ್ರಸ್ತೆ ಆರೋಪಿ ನಿತೇಶ್ ವಿರುದ್ಧ ದೂರು ದಾಖಲಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin