ಮೈಸೂರು: ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ನ್ಯಾಯಾಂಗ ಬಂಧನದಲ್ಲಿದ್ದ ಸ್ಯಾಂಟ್ರೋ ರವಿಯನ್ನು ಇಂದು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಸಿಐಡಿ ಕಸ್ಟಡಿಗೆ ವಹಿಸಿದೆ.ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.