Spread the love

ಪ್ರಧಾನಿ ಮೋದಿ ಗುರುವಾರ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಕಲ್ಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದಲ್ಲಿ ತಾಂಡಾ, ಹಟ್ಟಿ, ಕಾಲೋನಿಗಳಲ್ಲಿ ವಾಸವಾಗಿರುವ 51,900 ಕುಟುಂಬಗಳಿಗೆ ಏಕಕಾಲದಲ್ಲಿ ಹಕ್ಕುಪತ್ರ ವಿತರಣೆಗೆ ಚಾಲನೆ ನೀಡಲಿದ್ದಾರೆ,

ಇದಕ್ಕಿಂತ ಮೊದಲು ಯಾದಗಿರಿ ಜಿಲ್ಲೆ ಸುರಪುರದ ಕೊಡೆಕಲ್ ಗ್ರಾಮದಲ್ಲಿ 4,223 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ದೆಹಲಿಯಿಂದ ಕಲಬುರ್ಗಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಕಲಬುರ್ಗಿ ವಿಮಾನ ನಿಲ್ದಾಣದಿಂದ ಕೊಡೆಕಲ್ ಬಳಿ ನಿರ್ಮಿಸಿರುವ ವಿಶೇಷ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ನಾರಾಯಣಪುರ ಬಸವಸಾಗರ ಜಲಾಶಯದ ಜಿಪಿಎಸ್ ರಿಮೋಟ್ ಆಧಾರಿತ ಜಲಾಶಯ ಗೇಟುಗಳ ಚಾಲನೆ ವ್ಯವಸ್ಥೆ ಉದ್ಘಾಟಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ.


Spread the love

By admin