Spread the love

ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ನ್ಯೂಸ್…ಕಳೆದ 18 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್, ಇದೀಗ ತಮ್ಮ ಆರೋಗ್ಯದ ಕುರಿತು ತಾವೇ ಟ್ವಿಟ್ ಹಾಗೂ ಇನ್‌ಸ್ಟಾ ಗ್ರಾಮ್‌ನಲ್ಲಿ ಮೆಸೇಜ್ ಮಾಡಿದ್ದಾರೆ. ‌”ನಾನು ಎಲ್ಲರಿಗೂ ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ.

ನಿಮ್ಮ ಅಪಾರ ಬೆಂಬಲಕ್ಕೆ ನನ್ನ ಧನ್ಯವಾದಗಳು. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಇದೀಗ ನಾನು ಸುಧಾರಿಸಿಕೊಳ್ಳುತ್ತಿದ್ದೇನೆ. ಇವನ್ನೆಲ್ಲ ನಿಮಗೆ ಹೇಳಬೇಕು ಅಂತ ಅನಿಸಿತು. ನಾನು ನಿಮಗೆ ಆಭಾರಿಯಾಗಿದ್ದೇನೆ. ಇದು ನನ್ನ ಆರೋಗ್ಯದ ಚೇತರಿಕೆಯ ಹಾದಿ. ನಿಮ್ಮೆಲ್ಲರಿಗೂ ನನ್ನ ಕೃತಜ್ಞತೆಗಳು. ಈ ರೀತಿಯ ಪದಗಳಲ್ಲಿ ಕೃತಜ್ಞತೆ ಹೇಳುವುದಕ್ಕೆ ಸಾಲುವುದೇ ಇಲ್ಲ. ನಿಮ್ಮ ಬೆಂಬಲವೇ ನನಗೆ ಒಂದು ರೀತಿಯ ಎನರ್ಜಿ ಇದ್ದಂತೆ. ಈ ಕಷ್ಟದ ಸಮಯದಲ್ಲಿ ನನಗೆ ಅದೇ ಶಕ್ತಿ” ಅಂತ ರಿಷಬ್ ಪಂತ್ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಇನ್ನು ಟೀಟ್ ಮೂಲಕವೂ ರಿಷಭ್ ಪಂತ್ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಎಲ್ಲಾ ಬೆಂಬಲ ಮತ್ತು ಶುಭ ಹಾರೈಕೆಗಳಿಗಾಗಿ ನಾನು ವಿನಮ್ರ ಮತ್ತು ಕೃತಜ್ಞನಾಗಿದ್ದೇನೆ. ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ. ಚೇತರಿಕೆಯ ಹಾದಿ ಪ್ರಾರಂಭವಾಗಿದೆ ಮತ್ತು ಮುಂಬರುವ ಸವಾಲುಗಳಿಗೆ ನಾನು ಸಿದ್ಧನಿದ್ದೇನೆ” ಅಂತ ಪಂತ್‌ ಟೀಟ್ ಮಾಡಿದ್ದಾರೆ.

ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ರಿಷಭ್ ಪಂತ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಯ ಸ್ಪೋರ್ಟ್ ಮೆಡಿಸಿನ್ ಕೇಂದ್ರದ ಮುಖ್ಯಸ್ಥ ಮತ್ತು ಆರ್ಥೋಸ್ಕೋಪಿ ಮತ್ತು ಭುಜದ ಸೇವೆಯ ನಿರ್ದೇಶಕ ಡಾ. ಪರ್ದಿವಾಲಾ ಅವರ ಮೇಲ್ವಿಚಾರಣೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ.

ರಿಷಬ್ ಪಂತ್ ಈ ತಿಂಗಳ ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. “ರಿಷಭ್ ಪಂತ್ ಅವರು ಶುಕ್ರವಾರ ಮೊಣಕಾಲಿನ ಅಸ್ಥಿರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ವೀಕ್ಷಣೆಯಲ್ಲಿದ್ದಾರೆ. ಮುಂದಿನ ಕ್ರಮ ಮತ್ತು ಪುನರ್ವಸತಿಯನ್ನು ಡಾ. ದಿನ್‌ಶಾ ಪರ್ದಿವಾಲಾ ಮತ್ತು ಬಿಸಿಸಿಐ ಕ್ರೀಡಾ ವಿಜ್ಞಾನ ಮತ್ತು ಔಷಧ ತಂಡವು ಅನುಸರಿಸುತ್ತದೆ” ಎಂದು ಬಿಸಿಸಿಐ ಮೂಲವು ಪಿಟಿಐಗೆ ತಿಳಿಸಿದೆ.


Spread the love

By admin