Spread the love

ವಿಜಯನಗರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವ ಬರದಲ್ಲಿ ಮಾತಿನ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ವಲಸಿಗ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕರ್ನಾಟಕ ರಾಜ್ಯವನ್ನು ರೋಗಗ್ರಸ್ಥ ರಾಜ್ಯವನ್ನಾಗಿ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನ ಮಾರಿಕೊಂಡಿದ್ದಾರೆ. ಶಾಸಕರ ಸ್ಥಾನ ಮಾರಿಕೊಂಡು ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆಗೆ ಕಾರಣರಾದರು ಎಂದು ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಹೋದ ಶಾಸಕರ ವಿರುದ್ಧ ಕಿಡಿಕಾರುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ ಹರಿಪ್ರಸಾದ್, ಪ್ರಧಾನಿ ಮೋದಿ ಒಬ್ಬ ಸುಳ್ಳಿನ ಸರದಾರ. ಕಾಂಗ್ರೆಸ್ ದೇಶಕ್ಕಾಗಿ, ರಾಜ್ಯಕ್ಕಾಗಿ ಏನೂ ಮಾಡಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು


Spread the love

By admin