ಕಲಬುರ್ಗಿ: ಕಾಂಗ್ರೆಸ್ ಭದ್ರಕೋಟೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಕ್ಷೇತ್ರ ಕಲಬುರ್ಗಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನಿಡಲಿದ್ದು, ಖರ್ಗೆ ಟಾರ್ಗೆಟ್ ಮಾಡುವ ಮೂಲಕ ಕಲಬುರ್ಗಿ ಮೇಲೆ ಬಿಜೆಪಿ ಕಣ್ಣಿಟ್ಟಿದೆ ಎಂದೇ ಹೇಳಲಾಗುತ್ತಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಲ್ಲಗಳೆದಿದ್ದಾರೆ.
ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಮಲಿಕಾರ್ಜುನ ಖರ್ಗೆ ಅವರನ್ನು ಟಾರ್ಗೆಟ್ ಮಾಡಲು ಪ್ರಧಾನಿ ಮೋದಿ ಕಲಬುರ್ಗಿಗೆ ಬರುತ್ತಿಲ್ಲ. ಅದರ ಅವಶ್ಯಕತೆಯೂ ಅವರಿಗಿಲ್ಲ. ಇದು ಚುನಾವಣಾ ಪ್ರಚಾರದ ಕಾರ್ಯಕರಮವಲ್ಲ ಎಂದು ತಿಳಿಸಿದ್ದಾರೆ.
ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಆಗಮಿಸುತ್ತಿದ್ದಾರೆ. ಹಿಂದಿನ ಕಾಂಗ್ರೆಸ್ ಸರ್ಕಾರಗಳು ಮಾಡಿರದ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬರುತ್ತಿದ್ದಾರೆ ಎಂದರು.