Spread the love

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗೊಂದಿಚಟ್ನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 80 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಎರಡು ಮೂರು ದಿನಗಳಿಂದ ವಾಂತಿ, ಬೇಧಿ, ಹೊಟ್ಟೆನೋವಿನಿಂದ ಬಳಲುತ್ತಿದ್ದರು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಧ್ಯ ವಿದ್ಯಾರ್ಥಿಗಳು ಗುಣಮುಖರಾಗಿದ್ದಾರೆ. ಗೊಂದಿಚಟ್ನಿಹಳ್ಳಿಯ ವಸತಿ ಶಾಲೆ ವಿದ್ಯಾರ್ಥಿಗಳು ಗುಣಮುಖರಾಗುತ್ತಿದ್ದಂತೆ ಗಾಜನೂರಿನ ಮೊರಾರ್ಜಿದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳೂ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9 ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದಾರೆ. ಈ ಮಕ್ಕಳಲ್ಲಿಯೂ ವಾಂತಿ, ಬೇಧಿ, ಹೊಟ್ಟೆನೋವು ಕಾಣಿಸಿಕೊಂಡಿತ್ತು. ಅಸ್ವಸ್ಥ ಮಕ್ಕಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ವಸತಿ ಶಾಲಾ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.


Spread the love

By admin