Spread the love

ವಿಜಯಪುರ: ವಿಜಯಪುರದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಜನವರಿ 17 ರಂದು ತಡರಾತ್ರಿ ನಡೆದಿದೆ.

ವಿಜಯಪುರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಮೂವರು ಯುವಕರು ಪುಸಲಾಯಿಸಿ ಸ್ಯಾಟಲೈಟ್ ಬಸ್ ನಿಲ್ದಾಣದ ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ.

ಈ ವೇಳೆ ಒಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿದ್ದು, ಉಳಿದವರು ಸಾಥ್ ನೀಡಿದ್ದಾರೆ ಎಂದು ಹೇಳಲಾಗಿದೆ.

ಘಟನೆಯ ನಂತರ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ. ಜನವರಿ 18ರಂದು ಯುವತಿಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಯುವತಿಯನ್ನು ರಕ್ಷಿಸಿ ವಿಚಾರಣೆ ನಡೆಸಿದಾಗ ಅತ್ಯಾಚಾರ ನಡೆದ ಬಗ್ಗೆ ಮಾಹಿತಿ ನೀಡಿದ್ದಾಳೆ. ಯುವತಿಗೆ ಚಿಕಿತ್ಸೆ ಕೊಡಿಸಿ ಸ್ವಾದ್ವಾರ ಕೇಂದ್ರದಲ್ಲಿ ಇರಿಸಲಾಗಿದೆ. ವಿಜಯಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


Spread the love

By admin