Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್ ಗೆ ಬರಲು ಸಿದ್ಧರಾಗಿದ್ದಾರೆ. ಅದರಲ್ಲೂ ಹಾವೇರಿಯ ಇಬ್ಬರು ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಚುನಾವಣೆಗಾಗಿ ಅವರು ಏನಾದ್ರೂ ಸ್ಟ್ರಾಟಜಿ ಮಾಡಲಿ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.

ಮೊದಲು ಬಿಜೆಪಿಯವರು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಅಂದರು. ಈಗ ಪ್ರಧಾನಿ ಮೋದಿ ನೇತೃತ್ವದಲ್ಲಿ ಚುನಾವಣೆ ಅಂತಿದ್ದಾರೆ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಆದರೂ ಮಹಿಳೆಯರಿಗಾಗಿ ಯಾವುದೇ ಯೋಜನೆ ಜಾರಿಗೆ ತಂದಿಲ್ಲ. ಈಗ ನಾವು ಯೋಜನೆಗಳನ್ನು ಘೋಷಿಸಿದ ಬಳಿಕ ತಾವೂ ಘೋಷಣೆ ಮಾಡಿದ್ದಾರೆ. ಬಿಜೆಪಿಯ ಒಂದೊಂದು ಭ್ರಷ್ಟಾಚಾರಗಳು ಹೊರ ಬರುತ್ತಿವೆ ಎಂದು ವಾಗ್ದಾಳಿ ನಡೆಸಿದರು.


Spread the love

By admin