Spread the love

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ.

ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ ಹಿಂಡನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆಯಲ್ಲಿ ಕಾಡಾನೆ ದಾಳಿ ಮಾಡಿದೆ.

ಎರಡು ದಿನಗಳ ಹಿಂದೆಯಷ್ಟೇ ನಂಜಯ್ಯ ಅವರನ್ನು ದಿನಗೂಲಿ ನೌಕರನಾಗಿ ಅರಣ್ಯ ಇಲಾಖೆ ನೇಮಕ ಮಾಡಿಕೊಂಡಿತ್ತು. ಇಂದು ಕಾಡಾನೆ ಹಿಂಡು ಓಡಿಸುವ ವೇಳೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Spread the love

By admin