Spread the love

ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್​​ ಫರ್ನಾಂಡಿಸ್​​ಗೆ ಸಂಕಷ್ಟ ಉಂಟಾಗಿದೆ. ಸುಕೇಶ್ ಜತೆ ಆಪ್ತವಾಗಿದ್ದ ಕಾರಣಕ್ಕೆ ಜಾಕ್ವೆಲಿನ್ ಕೂಡ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಸದ್ಯ ದೆಹಲಿ ಕೋರ್ಟ್​ಗೆ ಹಾಜರಾಗಿರುವ ಜಾಕ್ವೆಲಿನ್ ಅವರು, ಸುಕೇಶ್ ನನ್ನ ಭಾವನೆಗಳ ಜತೆ ಆಟ ಆಡಿದ ಹಾಗೂ ನನ್ನ ಜೀವನವನ್ನು ನರಕ ಮಾಡಿದ’ ಎಂದು ಹೇಳಿದ್ದಾರೆ. ಸುಕೇಶ್ ಚಂದ್ರಶೇಖರ್ ಮಾಡಿದ ಮೋಸದ ಬಗ್ಗೆ ಅವರು ಕೋರ್ಟ್​ಗೆ ವಿವರಿಸಿದ್ದಾರೆ.

ಸುಕೇಶ್ ಚಂದ್ರಶೇಖರ್ ಸಹಚರೆ ಪಿಂಕಿ ಇರಾನಿಯಿಂದ ಜಾಕ್ವೆಲಿನ್​ಗೆ ಆತನ ಪರಿಚಯ ಆಗಿತ್ತು. ಸರ್ಕಾರಿ ಅಧಿಕಾರಿ ಎಂದು ಸುಕೇಶ್​​ನನ್ನು ಪಿಂಕಿ ಪರಿಚಯಿಸಿದ್ದಳು. ‘ನಾನು ಸನ್ ಟಿವಿ ಮಾಲೀಕ’ ಎಂದು ಕೂಡ ಸುಕೇಶ್ ಹೇಳಿಕೊಂಡಿದ್ದ. ಜಯಲಲಿತಾ ತನ್ನ ಚಿಕ್ಕಮ್ಮ ಎಂದು ಆತ ಹೇಳಿಕೊಂಡಿದ್ದ.

‘ನಾನು ನಿಮ್ಮ ದೊಡ್ಡ ಫ್ಯಾನ್ ಎಂದು ಚಂದ್ರಶೇಖರ್ ಹೇಳಿದ್ದ. ನನ್ನ ಬಳಿ ದಕ್ಷಿಣ ಭಾರತದಲ್ಲಿ ಸಿನಿಮಾ ಮಾಡುವಂತೆ ಹೇಳಿದ್ದ. ಸನ್​ ಟಿವಿ ಮಾಲೀಕ ಆಗಿರುವುದರಿಂದ ಹಲವು ಪ್ರಾಜೆಕ್ಟ್​​ಗಳು ಲೈನಪ್​ ಆಗಿವೆ. ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಆತ ಹೇಳಿದ್ದ. ಸುಕೇಶ್ ನನ್ನ ದಾರಿ ತಪ್ಪಿಸಿದ. ನನ್ನ ಜೀವನ ಹಾಗೂ ವೃತ್ತಿಜೀವನವನ್ನು ಆತ ಹಾಳು ಮಾಡಿದ’ ಎಂದು ಜಾಕ್ವೆಲಿನ್ ಹೇಳಿದ್ದಾರೆ.

‘ಸುಕೇಶ್ ಅರೆಸ್ಟ್​ ಆದ ನಂತರವೇ ಆತನ ನಿಜವಾದ ಹೆಸರು ನನಗೆ ಗೊತ್ತಾಗಿತ್ತು. ಆತ ಮಾಡುತ್ತಿದ್ದ ಕೆಲಸಗಳ ಬಗ್ಗೆ ಗೊತ್ತಾಯಿತು. ಪಿಂಕಿ ನನಗೆ ಮೋಸ ಮಾಡಿದಳು. ಆತನ ಹಿನ್ನೆಲೆ ಬಗ್ಗೆ ಪಿಂಕಿ ಎಂದಿಗೂ ಹೇಳಿಲ್ಲ. ಸುಕೇಶ್ ಹಿನ್ನಲೆ ಬಗ್ಗೆ ಆಕೆಗೆ ಗೊತ್ತಿತ್ತು’ ಎಂದು ಜಾಕ್ವೆಲಿನ್ ಹೇಳಿದ್ದಾರೆ.


Spread the love

By admin