Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಲಿಸಲು 500 ಕೋಟಿ ರೂಪಾಯಿ ಸುಪಾರಿ ಕೊಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಡಿಕೆಶಿ ಕಾಂಗ್ರೆಸ್ ವರ್ಸಸ್ ಸಿದ್ದರಾಮಯ್ಯ ಕಾಂಗ್ರೆಸ್ ಎನ್ನುವಂತಾಗಿದೆ.

ಡಿ ಕಾಂಗ್ರೆಸ್ ಸೋಲಿಸಲು ಎಸ್ ಕಾಂಗ್ರೆಸ್ ಗೆ 500 ಕೋಟಿ ರೂಪಾಯಿ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಇವರಿಬ್ಬರಿಂದಾಗಿ ಬಿಜೆಪಿಗೆ ಲಾಭವಾಗುತ್ತದೆ. ಅವರಿಬ್ಬರೂ ಇಲ್ಲದಿದ್ದರೂ ಕೂಡ ಬಿಜೆಪಿಗೆ ಲಾಭವಾಗುತ್ತದೆ. ಈಗಾಗಲೇ ನರೇಂದ್ರ ಮೋದಿ, ಅಮಿತ್ ಶಾ ಹವಾ ಶುರುವಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಅಮಿತ್ ಶಾ ಮತ್ತೆ ರಾಜ್ಯಕ್ಕೆ ಬರುತ್ತಿದ್ದಾರೆ. ಫೆಬ್ರವರಿ ಮೊದಲ ವಾರದಲ್ಲಿ ಪ್ರಧಾನಿ ಮೋದಿ ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಸಚಿವ ಅಶೋಕ್ ಹೇಳಿದ್ದಾರೆ.


Spread the love

By admin