Spread the love

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ.

ಸಾವಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮನೆಯಲ್ಲಿ ಟ್ಯೂಷನ್ ಹೇಳಿಕೊಡುವುದಾಗಿ ವರ್ಷದಿಂದ ಮಕ್ಕಳನ್ನು ಕರೆಸಿಕೊಂಡು ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಮಾಹಿತಿ ತಿಳಿದ ಪೋಷಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಅವರ ಸೂಚನೆ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.


Spread the love

By admin