Spread the love

ಚಿತ್ರದುರ್ಗ: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿಳಿಸಿದ್ದಾರೆ.

ಹಿರಿಯೂರಿನ ವಿವಿ ಪುರ ಕ್ರಾಸ್ ಬಳಿ ಭಾನುವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಒನಕೆ ಓಬವ್ವ, ಮದಕರಿ ನಾಯಕರಂತಹವರು ಜನಿಸಿದ ನಾಡಲ್ಲಿ ಟಿಪ್ಪು ನಾಮ ಜಪಿಸುವ ಮತಾಂಧರಿಗೆ ಮತ ಹಾಕಬೇಕೆ ಎಂದು ಬಿ.ಎಲ್. ಸಂತೋಷ್ ಪ್ರಶ್ನಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆರಂಭ, ರೈಲ್ವೆ ಮಾರ್ಗ, ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಲು ಪ್ರಧಾನಿಯವರು ಕಾರಣ. ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಪ್ರಧಾನಿಯವರೇ ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.


Spread the love

By admin