Spread the love

ಬೆಳಗಾವಿ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿದ್ದ ಓರ್ವ ಮಹಿಳೆ ಹಾಗೂ ಕೊಟ್ಟಿಗೆಯಲ್ಲಿದ್ದ 6 ಕುರಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಬಳಿ ನಡೆದಿದೆ.

ಮರಿಕಟ್ಟಿ ಗ್ರಾಮದಿಂದ ಕಬ್ಬು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಕಬ್ಬು ಕಾರ್ಖಾನೆಯತ್ತ ಸಾಗಿತ್ತು. ಶೀಗಿಹಳ್ಳಿ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಮನೆ ಮೇಲೆ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಟ್ರ್ಯಾಕ್ಟರ್ ಮನೆ ಮೇಲೆ ಬಿದ್ದ ಪರಿಣಾಮ ಮನೆಯ ಒಂದು ಭಾಗದಲ್ಲಿ ಕೊಟ್ಟಿಗೆಯಲ್ಲಿದ್ದ 6 ಕುರಿಗಳು ಮನೆಯ ಛಾವಣಿ ಕೆಳಗೆ ಸಿಲುಕಿ ಸಾವನ್ನಪ್ಪಿವೆ. ಸ್ಥಳಕ್ಕೆ ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

By admin