Spread the love

ಬೆಂಗಳೂರು: ಬಜೆಟ್ ಮತ್ತು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ. ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆ ಸಲ್ಲಿಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಈ ಕುರಿತಾಗಿ ಅವರು ವಿವಿಧ ಪ್ರಮುಖ ಇಲಾಖೆಗಳ ಮುಖ್ಯಸ್ಥರಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ಫೆಬ್ರವರಿ 17 ರಂದು ಸಿಎಂ ಬಜೆಟ್ ಮಂಡನೆಗೆ ಸಿದ್ಧತೆ ಕೈಗೊಂಡಿದ್ದು, ವಿವಿಧ ಇಲಾಖೆಗಳ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಸಾರ್ವತ್ರಿಕ ವಿಧಾನಸಭೆ ಚುನಾವಣೆ ಮತ್ತು ಬಜೆಟ್ ಅಧಿವೇಶನ ಇರುವ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆ ಸಲ್ಲಿಸದಂತೆ ಸೂಚನೆ ನೀಡಿದ್ದಾರೆ.

ಬಜೆಟ್ ಸಿದ್ಧತೆ, ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ವರ್ಗಾವಣೆಗಳಿಂದ ಹಿನ್ನಡೆಯಾಗುತ್ತದೆ. ಹಾಗಾಗಿ, ಯಾವುದೇ ವರ್ಗಾವಣೆ ಅಥವಾ ನಿಯೋಜನೆ ಪ್ರಸ್ತಾವನೆ ಸಲ್ಲಿಸಬಾರದು ಎಂದು ಸಿಎಂ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.


Spread the love

By admin