Spread the love

ಮಂಡ್ಯ: ಯಾವುದೇ ಸವಾಲು ಬಂದರೂ ನಾನು ಎದುರಿಸಲು ಸಿದ್ಧವಾಗಿದ್ದೇನೆ ಎಂದು ತಮ್ಮ ರಾಜಕೀಯ ಎದುರಾಳಿಗಳಿಗೆ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿ ಗ್ರಾಮದಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆಯೇ ಕಠಿಣ ಸವಾಲು ಸ್ವೀಕರಿಸಿ ಗೆದ್ದು ಬಂದಿದ್ದೇನೆ.

ಇನ್ನು ಮುಂದೆ ಯಾವುದೇ ಸವಾಲು ಬಂದರೂ ನಾನು ಬೇಡ ಅನ್ನುವುದಿಲ್ಲ ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಅಖಾಡಕ್ಕೆ ಇಳಿಯುವ ವಿಚಾರದ ಬಗ್ಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಸ್ಪರ್ಧಿಸಿದರೆ ಅದಕ್ಕೆ ನನ್ನ ಸ್ವಾಗತವಿದೆ. ನಾಣು ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.


Spread the love

By admin