Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಎಸ್.ಎಂ. ಕೃಷ್ಣ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.

ಬೆಂಗಳೂರಿನ ಸದಾಶಿವನಗರದ ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿಗಳು ಪದ್ಮವಿಭೂಷಣ ಗೌರವ ಪುರಸ್ಕಾರಕ್ಕಾಗಿ ಅವರನ್ನು ಅಭಿನಂದಿಸಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಆರ್. ಅಶೋಕ್ ಮೊದಲಾದ ನಾಯಕರು ಸಾಥ್ ನೀಡಲಿದ್ದಾರೆ.


Spread the love

By admin