ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ.
2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಿಎಂಟಿಸಿ ಬಸ್ ಚಾಲಕನ ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಒಬ್ಬರು ಸಾವು ಕಂಡಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕ್ಕಜಾಲ ಸಂಚಾರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.