Spread the love

ವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 132 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,739 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 1,896 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,49,802 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 34,835 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,36,02,459 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 94,534 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.


Spread the love

By admin