ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ಸಂಚಲನ ಮೂಡಿಸಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಗಟ್ಟಿಯಾಗಿದೆ. ಕಾಂಗ್ರೆಸ್ ನಾಯಕರು ತಾವೇ ಅಧಿಕಾರಕ್ಕೆ ಬಂದಿದ್ದೇವೆ ಎಂದು ಪೋಸ್ ಕೊಡುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಗುಡುಗಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಮಿತ್ ಶಾ ರಾಜ್ಯ ನಾಯಕರಿಗೆ ಚುನಾವಣೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಅಥವಾ ದ್ವೇಷ ಆಧಾರಿತ ಇಲ್ಲ. ಕಾರ್ಯಕ್ರಮಗಳ ಮೂಲಕ ನಾವು ಚುನಾವಣೆಗೆ ಹೋಗುತ್ತಿದ್ದೇವೆ ಎಂದರು.
ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದೀವಿ ಎಂದು ಪೋಸ್ ಕೊಡುತ್ತಿದ್ದಾರೆ. ಯಾರು ಏನೇ ಹೇಳಲಿ ಬಿಜೆಪಿ ಗೆಲುವು ಖಂಡಿತ ಎಂದು ಭವಿಷ್ಯ ನುಡಿದರು.