Spread the love

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಆಯ್ಕೆ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸಿದ್ಧತೆ ನಡೆಸಿವೆ.

 

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಯಾವುದೂ ಅಂತಿಮವಲ್ಲ ಎಂದು ತಿಳಿಸಿದ್ದಾರೆ.

ನಿನ್ನೆ ಅಮಿತ್ ಶಾ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಗಟ್ಟಿಯಾಗಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳೂ ಇಲ್ಲ. ನಿನ್ನೆ ನಡೆದ ರೋಡ್ ಶೋ, ವಿಜಯ ಸಂಕಲ್ಪ ಸಮಾವೇಶ ಕಾರ್ಯಕರ್ತರಲ್ಲಿ ಇನ್ನಷ್ಟು ಉತ್ಸಾಹ ತುಂಬಿದೆ ಎಂದರು.


Spread the love

By admin