ಬೆಂಗಳೂರು: ಆರ್ಕಿಡ್ ಶಾಲಾ ಸಿಬ್ಬಂದಿಯಿಂದ ಪೋಷಕರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಆರ್ಕಿಡ್ ಶಾಲೆ ಸಿಬ್ಬಂದಿ ಸಂಜೆ ಪೋಷಕರ ಸಭೆ ಕರೆದಿತ್ತು.
ಆರ್ಕಿಡ್ ಶಾಲಾ ಆಡಳಿತ ಮಂಡಳಿ ಸಭೆ ಕರೆದಿತ್ತು.
ಸಭೆಗೆ ಆಹ್ವಾನಿಸಿ ಗೇಟ್ ಹೊರಗಡೆಯೇ ನಿಲ್ಲಿಸಲಾಗಿತ್ತು. ಈ ವೇಳೆ ಪೋಷಕರು ಹಾಗೂ ಆಡಳಿತ ಮಂಡಳಿ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಆಗ ಶಾಲಾ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪೋಷಕರು ಗಲಾಟೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಸಿಬಿಎಸ್‌ಇ ಸಿಲೆಬಸ್ ಮಾನ್ಯತೆ ಪಡೆಯದೇ ಸಿಬಿಎಸ್‌ಇ ಮಾನ್ಯತೆ ಪಡೆದ ಶಾಲೆ ಎಂದು ಬೋರ್ಡ್ ಅಳವಡಿಸಲಾಗಿದ್ದು, ಲಕ್ಷ ಲಕ್ಷ ರೂ. ಶುಲ್ಕ ಪಡೆದುಕೊಳ್ಳಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.