ಬೆಂಗಳೂರು: ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆಯೇ ವೇಗವಾಗಿ ಬಂದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.
30 ವರ್ಷದ ವೆಂಕಟೇಶ್ ಮೃತರು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದ ವೆಂಕಟೇಶ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ ರಸ್ತೆ ದುರಸ್ತಿ ಮಾಡದೇ ಬೇಜವಾಬ್ದಾರಿ ಮೆರೆಯುತ್ತಿರುವ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.