Spread the love

ಧಾರವಾಡ: ಕೃಷಿ ಪ್ರಶಸ್ತಿಗೆ ಭಾಜನರಾದವರ ಮಕ್ಕಳಿಗೆ ಕೃಷಿವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಸೇರಿದಂತೆ ಉನ್ನತ ಶಿಕ್ಷಣದ ಶುಲ್ಕವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಅವರು ಇಂದು ಕೃಷಿ ಇಲಾಖೆ ಹಾಗೂ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ರೈತ ಶಕ್ತಿ, ಕೃಷಿ ಕಾರ್ಮಿಕರ ಮಕ್ಕಳಿಗೆ ರೈತ ವಿದ್ಯಾ ನಿಧಿ, ಕೃಷಿ ಸಂಜೀವಿನಿ ವಾಹನಗಳ, ಡಾ: ಎಸ್.ವಿ.ಪಾಟೀಲ್, ಕೃಷಿ ಸಂಶೋಧನೆ, ತರಬೇತಿ ಹಾಗೂ ರೈತರ ಶ್ರೇಯೋಭಿವ್ರದ್ಧಿ ಪೀಠದ ಲೋಕಾರ್ಪಣೆ ನರವೇರಿಸಿ ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

 

ರೈತರ ಪರವಾಗಿ ವಿಶೇಷ ಬಜೆಟ್

ಈ ಬಾರಿ ರೈತರ ಪರವಾಗಿ ವಿಶೇಷವಾದ ಬಜೆಟ್ ಇರಲಿದೆ. ಗ್ರಾಮೀಣ ಬದುಕು ಹಸನಾಗಬೇಕು. ಅಲ್ಲಿ ಆರ್ಥಿಕತೆ ಬೆಳೆದು ಸಾಮಾಜಿಕವಾಗಿ ಸಮಾನತೆ ತರುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಅದಕ್ಕಾಗಿ ಧಾರವಾಡ ಕೃಷಿ ವಿವಿ ಸ್ಥಾಪಕರಾದ ಡಾ: ಎಸ್.ವಿ ಪಾಟೀಲ್ ಅವರ ಹೆಸರಿನಲ್ಲಿ ಪೀಠ ಸ್ಥಾಪಿಸಿ ಉದ್ಘಾಟಿಸಲಾಗಿದೆ. ಕೃಷಿಗೆ ಪೂರಕವಾಗಿರುವ ಇತರೆ ಕಸುಬುದಾರರಿಗೆ ಕಾಯಕ ಯೋಜನೆ ರೂಪಿಸಲಾಗಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಮುಂದಿನ ವಾರ ಉದ್ಘಾಟಿಸಲಾಗುತ್ತಿದೆ. ಸ್ತ್ರೀ ಶಕ್ತಿ ಯೋಜನೆ ಜಾರಿಗೆ ತಂದು ಸ್ವಯಂ ಉದ್ಯೋಗಕ್ಕೆ ನೆರವು ನೀಡಲಾಗುತ್ತಿದೆ ಎಂದರು.


Spread the love

By admin