Spread the love

ರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇನ್ನು ಮೂರ್ನಾಲ್ಕು ತಿಂಗಳೊಳಗಾಗಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ರಾಜ್ಯ ನಾಯಕರು ಈಗಾಗಲೇ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ.

ರಾಷ್ಟ್ರಮಟ್ಟದ ನಾಯಕರುಗಳು ಸಹ ತಮ್ಮ ತಮ್ಮ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯ ಕೈಗೊಂಡಿದ್ದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮೊದಲಾದವರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

 

ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಈ ತಿಂಗಳ ಅಂತ್ಯದೊಳಗಾಗಿ ಮೂರು ಬಾರಿ ರಾಜ್ಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದ್ದು, ಫೆಬ್ರವರಿ 6ರಂದು ರಾಜ್ಯಕ್ಕೆ ಬರಲಿರುವ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಲ್ಲದೆ ಫೆಬ್ರವರಿ 13ರಂದು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುವ ನರೇಂದ್ರ ಮೋದಿಯವರು ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉದ್ಘಾಟಿಸಲಿದ್ದಾರೆ. ನಂತರ ಫೆಬ್ರವರಿ 27ರಂದು ಮೂರನೇ ಬಾರಿಗೆ ರಾಜ್ಯಕ್ಕೆ ಬರಲಿರುವ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.


Spread the love

By admin