Spread the love

ರಾಜ್ಯ ವಿಧಾನಸಭೆಗೆ ಮೂರ್ನಾಲ್ಕು ತಿಂಗಳುಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಚುನಾವಣೆ ದಿನಾಂಕ ಘೋಷಣೆಗೆ ಮುನ್ನವೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಬಿಜೆಪಿಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.

 

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆಯಲು ಸಿದ್ಧವಾಗಿರುವುದರ ಮಧ್ಯೆ ಮತ್ತೊಬ್ಬ ಮಾಜಿ ವಿಧಾನ ಪರಿಷತ್ ಸದಸ್ಯರು ಸಹ ಇದೇ ಹಾದಿ ಅನುಸರಿಸಲು ಮುಂದಾಗಿದ್ದಾರೆ. ಇದರಿಂದಾಗಿ ಮೈಸೂರು ಜಿಲ್ಲೆಯ ಇಬ್ಬರು ಪ್ರಮುಖ ನಾಯಕರು ಬಿಜೆಪಿ ತೊರೆದಂತಾಗುತ್ತದೆ.

ಹೌದು, ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ ನಾಗರಾಜ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಶೀಘ್ರದಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.


Spread the love

By admin