Spread the love

ಬೆಂಗಳೂರು: ಕೋರ್ಟ್ ಸೂಚನೆಯಂತೆ ಎಫ್‌ಐಆರ್ ದಾಖಲಿಸದ ಇನ್ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ನಿಂದ ಈ ಕುರಿತು ನಿರ್ದೇಶನ ನೀಡಲಾಗಿದ್ದು, ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ನಿರ್ದೇಶನ ನೀಡಲಾಗಿದೆ.

ಕಳ್ಳತನ ಆರೋಪದ ಬಗ್ಗೆ ತನಿಖೆಗೆ ಐದೂವರೆ ತಿಂಗಳು ವಿಳಂಬ ಮಾಡಿದ್ದರು. ಠಾಣಾಧಿಕಾರಿ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಿಸುವುದು ಠಾಣಾಧಿಕಾರಿಯ ಕರ್ತವ್ಯವಾಗಿದೆ. ಕರ್ತವ್ಯ ಲೋಪ ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

ಕಳ್ಳತನ ಆರೋಪದ ಬಗ್ಗೆ ತನಿಖೆ ನಡೆಸಲು ಎಸಿಎಂಎಂ ಕೋರ್ಟ್ ಆದೇಶ ನೀಡಿದ್ದು, 2022ರ ಮೇ 4 ರಂದು ಆದೇಶ ತಲುಪಿದ್ದರೂ, ಪೊಲೀಸ್ ಇನ್ಸ್ಪೆಕ್ಟರ್ ಕೆ.ವೈ. ಪ್ರವೀಣ್ ಎಫ್‌ಐಆರ್ ದಾಖಲಿಸಲು 5 ತಿಂಗಳು ವಿಳಂಬ ಮಾಡಿದ್ದರು. ನಿರ್ಲಕ್ಷಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಆದೇಶದಂತೆ ಎಫ್‌ಐಆರ್ ದಾಖಲಿಸುವುದು ಠಾಣಾಧಿಕಾರಿಯ ಕರ್ತವ್ಯವಾಗಿದೆ. ಕರ್ತವ್ಯ ಲೋಪ ಒಪ್ಪಲು ಸಾಧ್ಯವಿಲ್ಲವೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.


Spread the love

By admin