Spread the love

ಸಾವು ಎಂಬುದು ಎಲ್ಲಿ, ಯಾವಾಗ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಅಲ್ಲದೆ ಅನಾರೋಗ್ಯಕ್ಕೆ ಒಳಗಾಗಿರುವವರಿಗೆ ಮಾತ್ರ ಸಾವು ಬರುತ್ತದೆ ಎಂದಿಲ್ಲ. ಸಂತಸದಿಂದ ಇದ್ದ ಸಂದರ್ಭದಲ್ಲೂ ಜವರಾಯ ತನ್ನ ಅಟ್ಟಹಾಸ ಮೆರೆಯುತ್ತಾನೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

 

ಹೌದು, ಏಳನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತರೊಂದಿಗೆ ಖುಷಿ ಖುಷಿಯಾಗಿ ವಾಲಿಬಾಲ್ ಆಡುತ್ತಿದ್ದ ಸಂದರ್ಭದಲ್ಲಿ ದುರಂತ ಬಂದೆರಗಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಇಂತಹದೊಂದು ಘಟನೆ ನಡೆದಿದೆ.

ಕೊಪ್ಪಳ ಕ್ಯಾಂಪ್ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಮಂಗಳವಾರ ಹನುಮಂತ ನಾರಾಯಣ ಸ್ವಾಮಿ ಎಂಬ 13 ವರ್ಷದ ಬಾಲಕ ವಾಲಿಬಾಲ್ ಆಡುವಾಗ ಕಾಲು ಜಾರಿ ಚರಂಡಿಯಲ್ಲಿ ಬಿದ್ದಿದ್ದಾನೆ.

ಈ ವೇಳೆ ಆತನ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಬಾಲಕನನ್ನು ಜವಳಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತಾದರೂ ಯಾವುದೇ ಪ್ರಯೋಜನವಾಗದೆ ಬಾಲಕ ಮೃತಪಟ್ಟಿದ್ದಾನೆ.


Spread the love

By admin