Spread the love

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಫೈನ್ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿ ನೀಡಲು ಆದೇಶಿಸಲಾಗಿದೆ.

ಕಾನೂನು ಸೇವೆಗಳ ಪ್ರಾಧಿಕಾರದ ಮನವಿ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.

ವೀರಪ್ಪ ಮನವಿ ಮೇರೆಗೆ ಸರ್ಕಾರದಿಂದ ರಿಯಾಯಿತಿ ನೀಡಲಾಗಿದೆ.

ಫೆಬ್ರವರಿ 11 ರೊಳಗೆ ಫೈನ್ ಕಟ್ಟುವವರಿಗಾಗಿ ಸೀಮಿತ ಅವಧಿಗೆ ರಿಯಾಯಿತಿ ನೀಡಲಾಗುವುದು. ಫೆಬ್ರವರಿ 11 ಲೋಕ ಅದಾಲತ್ ಹಿನ್ನೆಲೆಯಲ್ಲಿ ರಿಯಾಯಿತಿ ನೀಡಲಾಗುತ್ತದೆ. ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳಿಂದ ಆದೇಶ ಹೊರಡಿಸಲಾಗಿದೆ. ಈ ಮೂಲಕ ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ ಎಂದು ಹೇಳಲಾಗಿದೆ.


Spread the love

By admin