Spread the love

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮರದ ಮೇಲೆ ಮಹಿಳೆಯೊಬ್ಬರ ತಲೆ ಬುರುಡೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಬೆಂಗಳೂರಿನ ಅಕ್ಷಯ ನಗರದ ಹುಳಿಮಾವು ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತಲೆಬುರುಡೆಯೊಂದು ಪತ್ತೆಯಾಗಿದ್ದು, ಕಳೆದ 6 ತಿಂಗಳಿಂದ ಕೊಳೆತುಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ತನಿಖೆ ನಡೆಸಿರುವ ಹುಳಿಮಾವು ಪೊಲೀಸರು ಇದು ಮಹಿಳೆಯ ತಲೆ ಬುರುಡೆ ಎಂಬುದನ್ನು ಪತ್ತೆ ಮಾಡಿದ್ದಾರೆ.

7 ತಿಂಗಳ ಹಿಂದೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ನೇಪಾಳಿ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದು, ಅದೇ ಮಹಿಳೆಯ ತಲೆ ಬುರುಡೆ ಇದಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಪತ್ತೆಯಾಗಿರುವ ತಲೆ ಬುರುಡೆ, ಅಸ್ಥಿಪಂಜರದ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.


Spread the love

By admin