Spread the love

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಹಲವು ಹಿಟ್ ಅಂಡ್ ರನ್ ಪ್ರಕರಣಗಳು ನಡೆದಿದ್ದು, ಇದೀಗ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಫೆಬ್ರವರಿ 2ರಂದು ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣಗೆರೆ ಮೆಟ್ರೋ ಸ್ಟೇಷನ್ ಕೆಳಗೆ ಮಧ್ಯಾಹ್ನ 1:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕೆಂಪು ಬಣ್ಣದ ಕಾರು ಆಕೆಗೆ ಡಿಕ್ಕಿ ಹೊಡೆದಿದೆ.

 

ಬಳಿಕ ಚಾಲಕ ಕಾರು ನಿಲ್ಲಿಸದೆ ಅಲ್ಲಿಂದ ಹೋಗಿದ್ದಾನೆ. ಈ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಗಾಯಗೊಂಡಿದ್ದ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಕಾರು ಚಾಲಕನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.


Spread the love

By admin