Spread the love

ಬೆಂಗಳೂರು: ಬೆಂಗಳೂರಿನಲ್ಲಿ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸೋಸಿಯೇಟ್ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬಹುದಾಗಿದೆ. ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂದು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.


Spread the love

By admin