Spread the love

ಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೆಜ್ ಮುಷರಫ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ರಾವಲಪಿಂಡಿಯ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅಮಿಲೋಡೋಸಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಪರವೇಜ್ ಮುಷರಫ್, 2016ರಿಂದ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅವರನ್ನು ರಾವಲ್ಪಿಂಡಿಯ ಆರ್ಮ್ಡ್ ಫೋರ್ಸಸ್ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಕಳೆದ ಮೂರು ವಾರಗಳಿಂದ ಕಾಯಿಲೆ ಉಲ್ಬಣಗೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಮುಷರಫ್ ಸಾವನ್ನಪ್ಪಿದ್ದಾರೆ.


Spread the love

By admin