Spread the love

ಹುಬ್ಬಳ್ಳಿ: ಆರ್ ಎಸ್ ಎಸ್ ನವರು ಪ್ರಹ್ಲಾದ್ ಜೋಶಿ ಅವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಲು ಹುನ್ನಾರ ನಡೆಸಿದ್ದಾರೆ. ಆದರೆ ಜೋಶಿ ಕರ್ನಾಟಕ ಮೂಲದ ಬ್ರಾಹ್ಮಣರಲ್ಲ, ಮಹಾರಾಷ್ಟ್ರದ ಪೇಶ್ವೆಗಳ ವಂಶದವರು ಎಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಮುಗಿ ಬಿದ್ದಿದ್ದಾರೆ

ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಅರವಿಂದ್ ಬೆಲ್ಲದ್, ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ತಾವು ಏನು ಮಾತನಾಡುತ್ತಿದ್ದೇನೆ ಎಂಬುದೇ ಅವರಿಗೆ ಗೊತ್ತಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಸರ್ಕಾರದಲ್ಲಿ ಯಾವುದೇ ಜಾತಿ, ಪಂಥ ನೋಡಲ್ಲ, ಯಾರು ಯೋಗ್ಯರಿದ್ದಾರೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡ್ತಾರೆ. ಇದು ಇಡೀ ದೇಶಕ್ಕೆ ಗೊತ್ತಿರುವ ವಿಚಾರ. ಕುಮಾರಸ್ವಾಮಿ ದೇಶದ ಮಹಾಮುತ್ಸದ್ದಿ ರಾಜಕಾರಣಿಯಾದ ಮಾಜಿ ಪ್ರಧಾನಿ ದೇವೇಗೌಡರ ಮಗ. ಮಾಜಿ ಸಿಎಂ ಆಗಿರುವ ಅವರು ಈ ರೀತಿ ತಳ ಬುಡ ಇಲ್ಲದ ಹೇಳಿಕೆ ನೀಡುವುದನ್ನು ನೋಡಿದರೆ ಅವರು ಮಾನಸಿಕ ಸ್ಥಿತಿಮಿತ ಕಳೆದುಕೊಂಡಿದ್ದಾರೆ ಎನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ


Spread the love

By admin