Spread the love

ಕೋಲಾರ: ಮುಂಬರುವ ಚುನಾವಣೆಯಲ್ಲಿ ಕೋಲಾರದಲ್ಲಿ ನಾನು ನೂರಕ್ಕೆ ನೂರರಷ್ಟು ಗೆಲ್ಲುತ್ತೇನೆ ಇದರಲ್ಲಿ ಅನುಮಾನವೇ ಬೇಡ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಅಂತೆ ಕಂತೆಗಳ ಬಗ್ಗೆ ನಾನು ಕಿವಿಗೊಡಲ್ಲ.

100% ನಾನು ಕೋಲಾರದಲ್ಲಿ ಗೆದ್ದೇ ಗೆಲ್ಲುತ್ತೇನೆ. ನಂಬಿಕೆ ನನಗಿದೆ. ಹೈಕಮಾಂಡ್ ಹೇಳಿದರೆ ಸಾಕು. ಕೋಲಾರದಿಂದ ನೂರಕ್ಕೆ ನೂರರಷ್ಟು ಗೆಲ್ಲುವುದು ನಿಶ್ಚಿತ ಎಂದರು.

ಕಾಂಗ್ರೆಸ್ ನಲ್ಲಿ ಯಾವುದೇ ಅಸಮಾಧಾನವಿಲ್ಲ, ಕೋಲಾರದಿಂದ ಸ್ಪರ್ಧಿಸುವಂತೆ ಎಲ್ಲರೂ ಬೆಂಬಲ ನೀಡಿದ್ದಾರೆ. ಆಸ್ತಿ ಬೇಕಾದರೂ ಮಾರಲು ಸಿದ್ಧ. ಕೋಲಾರದಿಂದ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ. ಕೋಲಾರದಲ್ಲಿ ನನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

By admin