Spread the love

ಲಬುರ್ಗಿ: ಬಿಜೆಪಿಯ 7-8 ಶಾಸಕರು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಬಿಜೆಪಿಯ ಸುಳ್ಳು ಭರವಸೆಗಳು ರಾಜ್ಯದ ಜನತೆಗೆ ಅರ್ಥವಾಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

 

ಕಲಬುರ್ಗಿಯಲ್ಲಿ ಮಾತನಾಡಿದ ಎಂ.ಬಿ. ಪಾಟೀಲ್, ಬಿ.ಎಸ್. ಯಡಿಯೂರಪ್ಪ ಅವರನ್ನೇ ಬಿಜೆಪಿ ಪಂಚರ್ ಮಾಡಿದೆ. ಬರುವ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನ ಗೆದ್ದರೆ ಅದೇ ದೊಡ್ಡದು. ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಮೋದಿ, ಅಮಿತ್ ಶಾ ಅವರನ್ನು ರಾಜ್ಯಕ್ಕೆ ಕರೆಸುತ್ತಿದ್ದಾರೆ. ಮೋದಿ ಕಾರ್ಯಕ್ರಮಕ್ಕಿಂತ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ನೂರು ಪಟ್ಟು ಹೆಚ್ಚು ಜನ ಬಂದಿದ್ದರು ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ವಿಚಾರವಾಗಿ, ಕಾಂಗ್ರೆಸ್ ನಲ್ಲಿ ಸಿಎಂ ಆಗುವ ಅರ್ಹತೆ ಹಲವರಿಗೆ ಇದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಸಿಎಂ ಆಗುವವರು ಹಲವರಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಸಿಎಂ ಯಾರೆಂದು ನಿರ್ಧಾರ ಮಾಡುತ್ತೇವೆ ಎಂದರು.


Spread the love

By admin