Spread the love

ನ್ಯಾಯಮೂರ್ತಿಗಳ ನೇಮಕ ಕುರಿತಂತೆ ಕೇಂದ್ರ ಸರ್ಕಾರ ಹಾಗೂ ಕೊಲಿಜಿಯಂ ನಡುವೆ ನಡೆಯುತ್ತಿದ್ದ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಕೊಲಿಜಿಯಂ ಶಿಫಾರಸ್ಸು ಮಾಡಿದ್ದ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಈ ಹಿನ್ನಲೆಯಲ್ಲಿ ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಟನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್, ಪಟನಾ ಹೈಕೋರ್ಟ್ ನ್ಯಾಯಮೂರ್ತಿ ಎಹಸಾನುದ್ದೀನ್ ಅಮಾನುಲ್ಲಾ, ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

 

ಈ ಐವರು ನ್ಯಾಯಮೂರ್ತಿಗಳು ಮುಂದಿನ ವಾರ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಮೂಲಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಿಕೆಯಾಗಲಿದೆ. ಪ್ರಸ್ತುತ 27 ನ್ಯಾಯಮೂರ್ತಿಗಳ ಸದಸ್ಯ ಬಲವಿದ್ದು, ಒಟ್ಟು ನ್ಯಾಯಮೂರ್ತಿಗಳ ಸಾಮರ್ಥ್ಯ 34 ಇದೆ.


Spread the love