ಗದಗ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೇ ಸಾವನ್ನಪಿರುವ ಘಟನೆ ಗದಗ ಜಿಲ್ಲೆಯ ಮುಳಗುಂದದ ಚಿಂದಿಪೇಟೆಯಲ್ಲಿ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೂವರು ಸಾವನ್ನಪ್ಪಿದ್ದಾರೆ.
ಮೃತ ಮಹಿಳೆ ಯಶೋಧಾಗೆ ಮೂರು ತಿಂಗಳ ಮಗುವಿದ್ದು, ಘಟನೆಯಲ್ಲಿ ಮಗು ಪ್ರಾಣಾಪಾಯದಿಮ್ದ ಪಾರಾಗಿದೆ. ಆದರೆ ಮೂರು ತಿಂಗಳ ಮಗು ತಾಯಿ ಹಾಗೂ ಅಣ್ಣನನ್ನು ಕಳೆದುಕೊಂಡು ತಬ್ಬಲಿಯಾಗಿದೆ.