Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿ ಜನಪ್ರಿಯ ಬಜೆಟ್ ಮಂಡನೆಗೆ ತಯಾರಿ ನಡೆಸಿದ್ದಾರೆ.

ಈ ನಿಟ್ಟಿನಲ್ಲಿ ಹೆಚ್ಚಿನ ಆದಾಯ ಸಂಗ್ರಹಕ್ಕಾಗಿ ಕಸರತ್ತು ಆರಂಭಿಸಿದ್ದಾರೆ. ಹೆಚ್ಚಿನ ಆದಾಯ ಕ್ರೋಢೀಕರಣಕ್ಕಾಗಿ ಬೊಮ್ಮಾಯಿ‌ ಸರ್ಕಾರ ವಿವಿಧ ರಾಜಸ್ವ ಜಮೆಗಳ ಮೇಲೆ ಕಣ್ಣಿಟ್ಟಿದೆ. ಸಿಎಂ ಬೊಮ್ಮಾಯಿ ಫೆ.17ಕ್ಕೆ 2023-24 ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಚುನಾವಣೆ ವರ್ಷದಲ್ಲಿ ಸಿಎಂ ಸಹಜವಾಗಿಯೇ ಚುನಾವಣಾ ಬಜೆಟ್ ಮಂಡನೆ ಮಾಡಲಿದ್ದಾರೆ. ಅಂದರೆ ಮುಂದಿನ ಚುನಾವಣೆಯಲ್ಲಿ ಅನುಕೂಲವಾಗುವಂತೆ ಜನಪ್ರಿಯ ಘೋಷಣೆಗಳೊಂದಿಗೆ ಬಜೆಟ್ ಮಂಡಿಸುವುದು ಬಹುತೇಕ ಖಚಿತ. ಹೀಗಾಗಿ ಬಜೆಟ್​​ಗಾಗಿ ದೊಡ್ಡ ಪ್ರಮಾಣದಲ್ಲಿ ಹಣಕಾಸು ನಿರ್ವಹಣೆ ಮಾಡಬೇಕಾಗಿದೆ.

ಜನಪ್ರಿಯ ಯೋಜನೆ ಘೋಷಣೆಗಾಗಿ ಗರಿಷ್ಠ ಪ್ರಮಾಣದಲ್ಲಿ ಆದಾಯ ಸಂಗ್ರಹಿಸುವ ಅನಿವಾರ್ಯತೆ ಬಿಜೆಪಿ ಸರ್ಕಾರಕ್ಕಿದೆ. 2023-24 ಸಾಲಿನಲ್ಲಿ ದೊಡ್ಡ ಪ್ರಮಾಣದ ರಾಜಸ್ವ ವೆಚ್ಚ ಇರುವ ಕಾರಣ ಹೆಚ್ಚಿನ ರಾಜಸ್ವ ಜಮೆಗಳತ್ತ ಸಿಎಂ ಬೊಮ್ಮಾಯಿ‌ ಗಮನ ಹರಿಸಿದ್ದಾರೆ. ಕೇಂದ್ರ ಬಜೆಟ್​ನಲ್ಲಿ ಕರ್ನಾಟಕಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬರದಿದ್ದರೂ, ತಕ್ಕ ಮಟ್ಟಿಗೆ ಅನುದಾನ ಬರಲಿದೆ. ಸದ್ಯ ಸಿಎಂ ಬೊಮ್ಮಾಯಿ ತಮ್ಮ ಬಜೆಟ್ ಘೋಷಣೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ರಾಜಸ್ವ ಜಮೆ ಹೆಚ್ಚಿಸಲು ಕಸರತ್ತು ನಡೆಸುತ್ತಿದ್ದಾರೆ.


Spread the love

By admin