Spread the love

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ.

ಇದಕ್ಕಾಗಿ ಭಾರತೀಯ ಜನತಾ ಪಕ್ಷ, ಕಾಂಗ್ರೆಸ್​, ಜಾತ್ಯತೀತ ಜನತಾದಳ, ಆಮ್​ ಆದ್ಮಿ ಪಕ್ಷ ಸೇರಿದಂತೆ ಇತರರು ಚುನಾವಣಾ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಹಲವು ತಂತ್ರಗಳನ್ನು ಹೆಣೆಯುತ್ತಿದ್ದಾರೆ. ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪ ಮತ್ತು ಟೀಕೆಗಳು ಜೋರಾಗಿವೆ. ಈ ನಿಟ್ಟಿನಲ್ಲಿ ಪಂಚರತ್ನ ರಥಯಾತ್ರೆ ಆರಂಭಿಸಿರುವ ಜೆಡಿಎಸ್​ ನಾಯಕ ಹೆಚ್​ ಡಿ ಕುಮಾರಸ್ವಾಮಿ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಮುಂದಿನ ಸಿಎಂ ಮಾಡಲು ಆರ್​ಎಸ್‌ಎಸ್ ನಿರ್ಧಾರ ಮಾಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಹ್ಲಾದ್​ ಜೋಶಿ ಸಿಎಂ ಮಾಡಲು ಆರ್​ಎಸ್​ಎಸ್ ನಿರ್ಧಾರ​: ದಾಸರಹಳ್ಳಿ ಪಂಚರತ್ನಯಾತ್ರೆ ವೇಳೆ ಮಾತನಾಡಿದ ಅವರು, ಪ್ರಹ್ಲಾದ್ ಜೋಶಿ ಅವರನ್ನು ಸಿಎಂ ಮಾಡಿ, 8 ಮಂದಿ ಉಪಮುಖ್ಯಮಂತ್ರಿ ಮಾಡುವ ಪ್ಲಾನ್ ಬಗ್ಗೆ ಆರ್​ಎಸ್ ಎಸ್ ದೆಹಲಿ ಕಚೇರಿಯಲ್ಲಿ ಚರ್ಚೆ ನಡೆದಿದೆ. ಪ್ರಹ್ಲಾದ್ ಜೋಶಿ ಅವರನ್ನು ಬಿಜೆಪಿ ಮುಂದಿನ ಸಿಎಂ ಮಾಡಲು ಆರ್ ಎಸ್ ಎಸ್ ನಿರ್ಧಾರ ಮಾಡಿದೆ ಎಂದು ಆರೋಪಿಸಿದರು. ಹೀಗಾಗಿ ನಿನ್ನೆಯಿಂದ ನಮ್ಮ ಮೇಲೆ ಗಧಾ ಪ್ರಹಾರ ಶುರು ಮಾಡಿದ್ದಾರೆ. ಅವರು ಶೃಂಗೇರಿ ಮಠ ಧ್ವಂಸ ಮಾಡಿದ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದವರು. ಅವರಿಗೆ ಸಂಸ್ಕೃತಿ ಇಲ್ಲ, ಸಂಸ್ಕೃತಿ ಬೇಕಿಲ್ಲ. ನಮ್ಮ ಭಾಗದ ಹಳೇ ಮೈಸೂರು ಭಾಗದ ಬ್ರಾಹ್ಮಣ ವರ್ಗಕ್ಕೆ ಸೇರಿದವರಲ್ಲ ಎಂದು ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


Spread the love

By admin